ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಕಾರು ಚಾಲಕ ಧನಂಜಯ್ (34) ಅವರ ತಾಯಿ ಕಲಾವತಿ (54) ಮೃತಪಟ್ಟವರು. ಕಾರಿನಲ್ಲಿ 5 ಮಂದಿ ಪ್ರಯಾಣ ಮಾಡುತ್ತಿದ್ದು ಇನ್ನು ಉಳಿದ ಮೂವರು ಮಂದಿ ಗಾಯಗೊಂಡಿದ್ದು, ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಕೂಡ ಪಲ್ಟಿಯಾಗಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿವೆ.
ಸ್ಥಳಕ್ಕೆ ಆಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರಿನ ಬೆಂಕಿ ನಂದಿಸಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.