ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆ ಮಾಡಿಸಿಲ್ಲ ಎಂದು ಕುಡಿದು ಬಂದು ಗಲಾಟೆ ಮಾಡುತಿದ್ದ ಮಗನನ್ನು ತಂದೆ ಹಾಗೂ ಹಿರಿಯ ಮಗ ಸೇರಿಕೊಂಡು ಕೊಲೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
25 ವರ್ಷದ ಮಂಜುನಾಥ ಉಳ್ಳಾಗಡ್ಡಿ ಮೃತ ಯುವಕ. ತಂದೆ ನಾಗಪ್ಪ ಉಳ್ಳೆಗಡ್ಡಿ (63) ಮತ್ತು ಅಣ್ಣ ಗುರುಬಸಪ್ಪ ಉಳ್ಳೆಗಡ್ಡಿ (28) ಮಂಜುನಾಥನ ತಲೆಗೆ ಕಲ್ಲು ಮತ್ತು ಇಟ್ಟಿಗೆಯಿಂದ ಹೊಡೆದು ಕ್ರೂರವಾಗಿ ಕೊಲೆ ಮಾಡಿದ್ದಾರೆ.
ಮಂಜುನಾಥ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದನು. ಆರಂಭದಲ್ಲಿ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಆದರೆ ಕೊನೆಗೆ ಮನೆಯವರು ಒಪ್ಪಿ ನಿಶ್ಚಿತಾರ್ಥ ಮಾಡಿದ್ದರು. ಆದರೂ ಮಂಜುನಾಥ ಕುಡಿದ ಮತ್ತಿನಲ್ಲಿ ಆಗಾಗ್ಗೆ ಜಗಳ ಮಾಡುತ್ತಿದ್ದ. ಹಾಗೆ ಈ ಮದುವೆ ಆಗುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ. ಇದೇ ವಿಚಾರವಾಗಿ ಮತ್ತೆ ಜಗಳ ನಡೆದು ಈ ಕೊಲೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ.