ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮದುವೆ ಖುಷಿಯಲ್ಲಿದ್ದ ಯುವಕನನ್ನು ಕ್ಷುಲ್ಲಕ ಕಾರಣಕ್ಕೆ ಆತನ ತಂದೆ ಹಾಗೂ ಸಹೋದರ ಸೇರಿ ಹತ್ಯೆಗೈದ ಘಟನೆ ನಡೆದಿದೆ.
ಮೃತನನ್ನು ಮಂಜುನಾಥ್ ಉಳ್ಳಾಗಡ್ಡಿ (25) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ನಾಗಪ್ಪ ಹಾಗೂ ಗುರುಬಸಪ್ಪ .
ಶನಿವಾರ ರಾತ್ರಿ ಮಂಜುನಾಥ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ತಂದೆ ಹಾಗೂ ಸಹೋದರ ಆತನನ್ನು ಕಲ್ಲು, ಇಟ್ಟಿಗೆಯಿಂದ ಹೊಡೆದು ಹತ್ಯೆಗೈದಿದ್ದಾರೆ.
ಮಾ.12ರಂದು ಮಂಜುನಾಥ್ ಮದುವೆ ನಿಗದಿಯಾಗಿತ್ತು. ಆತನ ಮದುವೆಗಾಗಿ ಸೇನೆಯಲ್ಲಿದ್ದ ಗುರುಬಸಪ್ಪ ರಜೆಯ ಮೇಲೆ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.