ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಈ ವರ್ಷದ ಹೋಳಿ ಹಬ್ಬ ಮಾ.14ರ ಶುಕ್ರವಾರ ನಡೆಯಲಿದ್ದು, ಈ ಹಿನ್ನೆಲೆ ಆ ಸಮಯದಲ್ಲಿ ಮುಸ್ಲಿಮರು ಮನೆಯೊಳಗೆ ಇರಬೇಕು ಎಂದು ಸೂಚಿಸಿದ್ದ ಸಂಭಾಲ್ ಪೊಲೀಸ್ ಅಧಿಕಾರಿಯ ಮಾತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಬಲಿಸಿದ್ದಾರೆ.
ಮಾ.14ರ ಶುಕ್ರವಾರ ಬರಲಿದ್ದು, ಅದೇ ದಿನ ರಂಜಾನ್ ತಿಂಗಳಿನ ಮುಸ್ಲಿಮರ ಪ್ರಾರ್ಥನೆ ಸಹ ಇದೆ. ಹೀಗಾಗಿ ಹೋಳಿ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ ಆದರೆ ಶುಕ್ರವಾರ (ನಮಾಜ್ಗಾಗಿ) ಒಂದು ವರ್ಷದಲ್ಲಿ 52 ಬಾರಿ ಬರುತ್ತದೆ. ಹೋಳಿ ಆಚರಣೆಗಳು ಕಡಿಮೆಯಾಗುವವರೆಗೆ ಮನೆಯೊಳಗೆ ಇರಬೇಕೆಂದು ನಾನು ಸಲಹೆ ನೀಡುತ್ತೇನೆ ಎಂದು ಶಾಂತಿ ಸಮಿತಿ ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಅನುಜ್ ಚೌಧರಿ ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಯೋಗಿ ಆದಿತ್ಯನಾಥ್, ಹಬ್ಬಗಳ ಸಮಯದಲ್ಲಿ ನಾವು ಪರಸ್ಪರರ ಭಾವನೆಗಳನ್ನು ಗೌರವಿಸಬೇಕು. ಪ್ರತಿ ಶುಕ್ರವಾರ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಹೋಳಿ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ. ನಮಾಜ್ ವಿಳಂಬ ಮಾಡಬಹುದು. ನಮಾಜ್ಗಾಗಿ ಮಸೀದಿಗೆ ಹೋಗುವುದು ಕಡ್ಡಾಯವಲ್ಲ ಎಂದು ಅವರು ಹೇಳಿದ್ದಾರೆ.
ಹೋಳಿ ದಿನ ಶುಕ್ರವಾರದ ನಮಾಜ್ನ್ನು ಮಧ್ಯಾಹ್ನ 2 ಗಂಟೆಯ ನಂತರ ನಡೆಸಲು ನಿರ್ಧರಿಸಿದ್ದು, ಇದಕ್ಕೆ ಧಾರ್ಮಿಕ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಸಂಭಾಲ್ ಪೊಲೀಸ್ ಅಧಿಕಾರಿಯ ಹೇಳಿಕೆಯ ಬಗ್ಗೆ ಉತ್ತರ ಪ್ರದೇಶದ ವಿರೋಧ ಪಕ್ಷ ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರು ಕಳವಳ ವ್ಯಕ್ತಪಡಿಸಿದ್ದು, ಸರ್ಕಾರದ ಅಧಿಕಾರಿಗಳು ಬಿಜೆಪಿಯ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.