ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಪ್ರಶಸ್ತಿಯ ಜೊತೆಗೆ 10 ಲಕ್ಷ ರೂ. ಚೆಕ್ ನೀಡಲಾಯಿತು.
ಈ ವೇಳೆ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಮಿಲೇಸುರ್ ಮೇರಾ ತುಮಾರಾ’ ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.