ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಮಂಡೆನೆಗೆ ‘ಬೆಂಗಳೂರಿನ ಪಾಲಿಗೆ ಮರಣ ಶಾಸನ’ ಎಂದು ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, 74ನೇ ತಿದ್ದುಪಡಿ ಬಗ್ಗೆ ನೀವು ಅಪಚಾರ ಮಾಡುತ್ತಿದ್ದೀರಿ. ಮುಖ್ಯಮಂತ್ರಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸ್ಥಳೀಯ ನಾಯಕತ್ವದ ಮೇಲೆ ಹೇರಿಕೆ ಮಾಡುತ್ತಿದ್ದಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಒಟ್ಟಾಗಿರಲಿ ಅಂತಾ 4 ಗೋಪುರ ನಿರ್ಮಿಸಿದ್ದರು. ಕೆಂಪೇಗೌಡರ ಪರಿಕಲ್ಪನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಿಎಂಗೆ ಪರಮಾಧಿಕಾರ ನೀಡಿ ಪಾಲಿಕೆ ಅಧಿಕಾರ ತೆಗೆದಿದ್ದಾರೆ. ಬೆಂಗಳೂರಿಗೆ ಈ ವಿಧೇಯಕ ಮರಣ ಶಾಸನ ತಂದಂತಾಗುತ್ತದೆ. ಬೆಂಗಳೂರಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ. ಒಬ್ಬ ಮೇಯರ್ ಇರಲಿ, ಕಮಿಷನರ್ ಡಿವೈಡ್ ಮಾಡಿ ಆಡಳಿತ ಮಾಡಿ ಎಂದು ಆರ್.ಅಶೋಕ್ ಒತ್ತಾಯಿಸಿದ್ದಾರೆ.
.