ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ನನ್ನು ಇಂದು ಬೆಂಗಳೂರು ವಿಶೇಷ ನ್ಯಾಯಾಲಯದ ಮುಂದೆ ಹಾಜರಿಪಡಿಸಲಾಗಿತ್ತು. ಈ ವೇಳೆ ಜಡ್ಜ್ ಮುಂದೆ ನಟಿ ಕಣ್ಣೀರಿಟ್ಟು ಗೋಳಾಡಿದರು.
ವಿಚಾರಣೆ ವೇಳೆ ತೊಂದ್ರೆ ಕೊಡ್ತಿದ್ದಾರಾ? ಹಿಲ್ ಟ್ರೀಟ್ಮೆಂಟ್ ಕೊಟ್ಟಿದ್ದಾರಾ..? ಎಂದು ಜಡ್ಜ್ ಕೇಳಿದ್ದಕ್ಕೆ ಕಣ್ಣೀರಿಡುತ್ತಲೇ ಉತ್ತರಿಸಿದ ರನ್ಯಾ, ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ.
ಸತ್ಯ ಒಪ್ಪಿಕೋ ಅಂತ ಹೆದರಿಸುತ್ತಿದ್ದಾರೆ. ತಲೆಗೆ ಸುತ್ತಿಗೆಯಲ್ಲಿ ಹೊಡೆದಂತೆ ಪ್ರಶ್ನೆ ಕೇಳ್ತಾರೆ, ಕೆಟ್ಟದಾಗಿ ಬೈಯ್ದಿದ್ದಾರೆ, ನಾನು ಏನು ಮಾಡಿಲ್ಲ ಅಂದ್ರು ಹಿಂಸೆ ಕೊಡ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಅಲ್ಲದೇ ನಾನು ಇದ್ರಿಂದ ಭಾವನಾತ್ಮಕವಾಗಿ ಕುಗ್ಗಿಹೋಗಿದ್ದೇನೆ ಎಂದು ಕೈ ಮುಗಿದು ಜಡ್ಜ್ ಮುಂದೆ ಬೇಡಿಕೊಂಡಿದ್ದಾರೆ.
ಈ ವೇಳೆ ವಾದ ಪ್ರತಿವಾದ ಆಲಿಸಿದ ಕೋರ್ಟ್, ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.