ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿ ರಿಲೀಸ್: ಇದ್ರಲ್ಲಿ ಭಾರತದ ನಗರಗಳು ಎಷ್ಟಿವೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದೆ. ಈ ಪೈಕಿ 13 ನಗರಗಳು ಭಾರತದಲ್ಲೇ ಇದೆ. ಇದು ಆತಂಕದ ಸುದ್ದಿಯಾಗಿರೋದಂತು ನಿಜ.

ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್‌ನ ‘ವಿಶ್ವ ವಾಯು ಗುಣಮಟ್ಟ ವರದಿ 2024’ ಪ್ರಕಾರ, ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾಗಿ ಉಳಿದಿದೆ. 2024 ರಲ್ಲಿ, ಭಾರತವು ವಿಶ್ವದ ಐದನೇ ಅತ್ಯಂತ ಕಲುಷಿತ ರಾಷ್ಟ್ರವಾಗಿತ್ತು. 2023 ರಲ್ಲಿ, ಭಾರತವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿತ್ತು.

ಇನ್ನು ಕಲುಷಿತ ನಗರಗಳಿಗೆ ಬರುವುದಾದರೆ, ಬರ್ನಿಹತ್, ದೆಹಲಿ, ಮುಲ್ಲನ್‌ಪುರ (ಪಂಜಾಬ್), ಫರಿದಾಬಾದ್, ಲೋನಿ, ನವದೆಹಲಿ, ಗುರಗಾಂವ್, ಗಂಗಾನಗರ, ಗ್ರೇಟರ್ ನೋಯ್ಡಾ, ಭಿವಾಡಿ, ಮುಜಫರ್‌ನಗರ, ಹನುಮಾನ್‌ಗಢ ಮತ್ತು ನೋಯ್ಡಾ ಸೇರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!