Thursday, January 29, 2026
Thursday, January 29, 2026
spot_img

ಸಾರಿಗೆ ನೌಕರರಿಂದ ನಾಳೆ ಬೆಂಗಳೂರು ಚಲೋಗೆ ಕರೆ, ಡಿಮ್ಯಾಂಡ್ಸ್‌ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವೇತನ ಹಿಂಬಾಕಿ ಮತ್ತು ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಗುರುವಾರ (ಜ.29) ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ.

ಗುರುವಾರ ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಸಂಜೆ 4 ಗಂಟೆ ವೇಳೆಗೆ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರದೇ ಇದ್ದ ಪಕ್ಷದಲ್ಲಿ ದೊಡ್ಡ ಹೋರಾಟಕ್ಕೆ ಜಂಟಿ ಕ್ರಿಯಾ ಸಮಿತಿ ಪ್ಲ್ಯಾನ್‌ ಮಾಡಿದೆ. ಸಾರಿಗೆ ನೌಕರರು ಸಾಮೂಹಿಕ ರಾಜೀನಾಮೆ ಅಸ್ತ್ರ ಪ್ರಯೋಗಿಸಲು ಸಜ್ಜಾಗಿದ್ದಾರೆ.

2020ರ ಜನವರಿ 1ರಿಂದ -2023ರ ಫೆಬ್ರವರಿ 28ರವರೆಗಿನ ವೇತನ ಪರಿಷ್ಕರಣೆ ಹಿಂಬಾಕಿ, 2024ರ ಜನವರಿ 1ರಿಂದ 4 ವರ್ಷಗಳ ವೇತನ ಒಪ್ಪಂದಕ್ಕೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ. ಆದರೆ, ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಾತ್ರ ಸಾರಿಗೆ ನೌಕರರು ಯಾವುದೇ ಮುಷ್ಕರ ಮಾಡುವಂತಿಲ್ಲ, ಮುಷ್ಕರಕ್ಕೆ ಬೆಂಬಲ ನೀಡುವಂತಿಲ್ಲ. ನಾಳೆ ಕೆಲಸಕ್ಕೆ ಬಾರದೇ ಇದ್ದಲ್ಲಿ ವೇತನ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಈ ಮಧ್ಯೆ, ಸಾರಿಗೆ ಸಂಘಟನೆಗಳ ಮತ್ತೊಂದು ಸಂಘಟನೆಯಾದ ಕೆಎಸ್‌ಆರ್‌ಟಿಸಿ ನೌಕರರ ಕೂಟವೂ ಸಹ ಪ್ರತಿಭಟನೆಗೆ ಮುಂದಾಗಿದ್ದು, ಶಿವರಾತ್ರಿ ನಂತರ ಫೆಬ್ರವರಿ 15ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಸಿಎಂ ಜೊತೆ ಚರ್ಚಿಸಿ ತೀರ್ಮಾನ ಮಾಡ್ತೇವೆ ಅಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !