ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಮತ್ತೆ ‘ದಿ ಡೆವಿಲ್’ ಶೂಟಿಂಗ್‌ಗೆ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ. ಸ್ಥಗಿತಗೊಂಡಿದ್ದ ಶೂಟಿಂಗ್ಗೆ ಮತ್ತೆ ಚಾಲನೆ ನೀಡಲಾಗುತ್ತಿದೆ.
ದರ್ಶನ್ ಭದ್ರತೆಗಾಗಿ ಭಾರೀ ಮೊತ್ತ ಹಣವನ್ನು ಚಿತ್ರತಂಡ ಖರ್ಚು ಮಾಡಿದ್ದಾರೆ. ಮಾರ್ಚ್ 12ರಿಂದ 15ರವರೆಗೆ ಮೈಸೂರಿನಲ್ಲಿ ‘ದಿ ಡೆವಿಲ್’ ಚಿತ್ರದ ಶೂಟಿಂಗ್ ಮಾಡಲು ಅನುಮತಿ ಸಿಕ್ಕಿದೆ.
ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಸಿಬ್ಬಂದಿ ನಿಯೋಜಿಸಲು 1,64,785 ರೂ. ‘ದಿ ಡೆವಿಲ್’ ಚಿತ್ರತಂಡ ಪಾವತಿಸಿದೆ.