ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ.
ರೇಖಾ(25) ಕೊಲೆಯಾದ ಸೊಸೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಬಂದು ನರಳಾಡಿ ರೇಖಾ ಸಾವನ್ನಪ್ಪಿದ್ದಾರೆ. ಇತ್ತ ಕೃತ್ಯವೆಸಗಿ ಪರಾರಿಯಾಗಿದ್ದ ಆರೋಪಿ ಮಾವ ಸಿದ್ದಪ್ಪನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.



