ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯಸ್ಸಾದ ತಂದೆ ತಾಯಿ ಬೇಡ ಆದರೆ ಅವರು ಮಾಡಿರುವ ಆಸ್ತಿ ಬೇಕು ಎನ್ನುವ ಜನರು ಈ ಸುದ್ದಿ ಓದಲೇಬೇಕು..
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ಪೋಷಕ ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರಿಕರಿಗೆ ಇದೆ ಎಂದು ಮಾಹಿತಿ ನೀಡಿದರು.