ಪ್ರಧಾನಿ ಮೋದಿಗೆ ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಧಾನ ಮಂತ್ರಿ ಮೋದಿ ಅವರಿಗೆ ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್” ಅನ್ನು ಇಂದು ದ್ವೀಪ ರಾಷ್ಟ್ರದಲ್ಲಿ ನಡೆದ ಸಮಾರಂಭದಲ್ಲಿ ಮಾರಿಷಸ್ ಅಧ್ಯಕ್ಷ ಧರಮ್ ಗೋಖೂಲ್ ಅವರು ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿದ ಮೋದಿ, “ಮಾರಿಷಸ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇದು ಕೇವಲ ನನಗೆ ಸಿಕ್ಕ ಗೌರವವಲ್ಲ, 1.4 ಶತಕೋಟಿ ಭಾರತೀಯರಿಗೆ ಸಿಕ್ಕ ಗೌರವ. ಇದು ಭಾರತ ಮತ್ತು ಮಾರಿಷಸ್ ನಡುವಿನ ಶತಮಾನಗಳಷ್ಟು ಹಳೆಯದಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಬಂಧಗಳ ಸಂಬಂಧಕ್ಕೆ ಸಿಕ್ಕ ಗೌರವವಾಗಿದೆ” ಎಂದು ಹೇಳಿದ್ದಾರೆ.

ಇನ್ನು ಈ ಗೌರವವನ್ನು ಪಡೆದ ಮೊದಲ ಭಾರತೀಯರೆಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಇದು ಪ್ರಧಾನಿ ಮೋದಿಗೆ ವಿದೇಶದಿಂದ ನೀಡಿದ 21ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!