ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬದಲು ನಿಮ್ಮ ಕಾಂಗ್ರೆಸ್ ಪಕ್ಷವನ್ನೇ ಮುಚ್ಚಿಬಿಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ವೇಳೆ ಅವರು ಮಾತನಾಡಿದರು. ಈ ವೇಳೆ, ಕಾಂಗ್ರೆಸ್ ಮುಚ್ಚಿಬಿಟ್ಟರೆ ದೇಶಕ್ಕೇನೂ ಆಗುವುದಿಲ್ಲ.
ಕಾಂಗ್ರೆಸ್ ಇರುವವರೆಗೆ ಈ ದೇಶಕ್ಕೆ ಅಭಿವೃದ್ಧಿ, ನೆಮ್ಮದಿ ಇಲ್ಲ. ಆ ಪಕ್ಷ ದೇಶಕ್ಕೆ ಗಂಡಾಂತರ ತರುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರಿಗೆ ಖಜಾನೆ ಹಣವನ್ನು ಕೊಡಲು ನಾವು ಬಿಡುವುದಿಲ್ಲ. ಇದನ್ನು ಸಂವಿಧಾನದ ಅಡಿಯಲ್ಲಿ ಕೊಡ್ತಾ ಇದ್ದೀರಾ? ಇದನ್ನು ಕೂಡಲೇ ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.