ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮಕ್ಕಳು ಸೇರಿ ನಾಲ್ವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ದಕ್ಷಿಣ ವಜೀರಿಸ್ತಾನದ ಅಜಮ್ ವಾರ್ಸಕ್ನಲ್ಲಿರುವ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಜಮಿಯತ್ ಉಲೇಮಾ ಇಸ್ಲಾಂ-ಫಜಲ್ (ಜೆಯುಐ-ಎಫ್) ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲ್ಲಾ ನದೀಮ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಗಾಯಗೊಂಡ ನಾಲ್ವರಲ್ಲಿ ಮಕ್ಕಳೂ ಸೇರಿದ್ದಾರೆ.

ಪಾಕಿಸ್ತಾನದ ಬುಡಕಟ್ಟು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಹಿಂಸಾಚಾರದ ಮಧ್ಯೆ ಈ ದಾಳಿ ನಡೆದಿದ್ದು, ಹೆಚ್ಚಿನ ಸಾವುನೋವುಗಳಿಗೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!