WEATHER | ರಾಜ್ಯದಲ್ಲಿ ಬಿಸಿಲಿನ ಅಬ್ಬರ ಕೊಂಚ ಇಳಿಕೆ, ಅಲ್ಲಲ್ಲಿ ಮೋಡ ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಬಿಸಿಲಿನ ಅಬ್ಬರ ಕಡಿಮೆಯಾಗಿದ್ದು, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆಯಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!