ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಇದೇ ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವಾಪಸ್ ಭೂಮಿಗೆ ಬರುವುದು ಖಚಿತವಾಗಿದೆ.
ಗಗನಯಾತ್ರಿಗಳು ಶೀಘ್ರದಲ್ಲೇ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಮತ್ತು ಸ್ಪೇಸ್‌ಎಕ್ಸ್ ಮೂಲದಿಂದ ತಿಳಿದು ಬಂದಿದೆ.
ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮತ್ತು ಇತರ ಗಗನಯಾತ್ರಿಗಳು ಮಾರ್ಚ್ 19 ರಂದು ಬಾಹ್ಯಾಕಾಶದಿಂದ ಭೂಮಿಯ ಕಡೆಗೆ ಹೊರಡಲಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಗಗನಯಾತ್ರಿಗಳನ್ನು ಭೂಮಿಗೆ ಕರೆ ತರಲು, ನಾಸಾ ಮತ್ತು ಸ್ಪೇಸ್‌ಎಕ್ಸ್ ಮಾರ್ಚ್ 14 ರಂದು ಫಾಲ್ಕನ್ 9 ರಾಕೆಟ್ ಮೂಲಕ ಕ್ರೂ-10 ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಫಾಲ್ಕನ್ -9 ರಾಕೆಟ್ ಉಡಾವಣೆಯಾಯಿತು. ಈ ಕಾರ್ಯಾಚರಣೆಯ ಅಡಿಯಲ್ಲಿ ಇಬ್ಬರೂ ಭೂಮಿಗೆ ಮರಳಲಿದ್ದಾರೆ.