ಹೊಸದಿಗಂತ ಡಿಜಿಟಲ್ ಡೆಸ್ಕ್:
ಓದಿನಲ್ಲಿ ಹಿಂದುಳಿದಿದ್ದ ಇಬ್ಬರು ಮಕ್ಕಳನ್ನು ತಂದೆಯೊಬ್ಬ ನೀರಿನಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಪ್ರತೀ ಬಾರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದುಕೊಳ್ಳುತ್ತಿದ್ದ ಮಕ್ಕಳನ್ನು ಕಂಡು ಚಿಂತೆಗೀಡಾಗಿದ್ದ ತಂದೆ ಈ ನಿರ್ಧಾರಕ್ಕೆ ಬಂದಿರುವುದಾಗಿ ಡೆತ್ ನೋಟ್ನಲ್ಲಿ ಬರೆದಿದ್ದಾರೆ. ಈ ಕ್ರೂರ ಘಟನೆ ಕಾಕಿನಾಡ ಜಿಲ್ಲೆಯ ಸರ್ಪವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವರದಿಗಳ ಪ್ರಕಾರ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಚಂದ್ರಕಿಶೋರ್ ಸ್ಥಳೀಯ ಒಎನ್‌ಜಿಸಿ ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದ. ತನ್ನ ಇಬ್ಬರು ಮಕ್ಕಳ ಬಗ್ಗೆ ಅತಿಯಾದ ಕನಸು ಕಂಡಿದ್ದ ಈತ ಪ್ರತೀ ಬಾರಿ ಅವರು ಪರೀಕ್ಷೆಯಲ್ಲಿ ಪಡೆಯುತ್ತಿದ್ದ ಅಂಕವನ್ನು ಕಂಡು ಅಸಮಾಧಾನಗೊಂಡಿದ್ದ. ಈ ಬಗ್ಗೆ ಹಲವು ಬಾರಿ ಮನೆಯಲ್ಲಿ ಗಲಾಟೆ ನಡೆದಿದೆ.
ಇತ್ತೀಚಿಗಷ್ಟೇ ಹೋಳಿ ಹಬ್ಬದ ಸಂದರ್ಭದಲ್ಲಿ, ಚಂದ್ರಕಿಶೋರ್ ತಮ್ಮ ಪತ್ನಿ ತನುಜಾ ಮತ್ತು ಇಬ್ಬರು ಪುತ್ರರಾದ ಜೋಶಿಲ್ ಮತ್ತು ನಿಖಿಲ್ ಅವರೊಂದಿಗೆ ತಮ್ಮ ಕಚೇರಿಗೆ ಹೋಗಿದ್ದರು. ನಂತರ, ಮಕ್ಕಳನ್ನು ಸಮವಸ್ತ್ರದ ಅಳತೆಗಳನ್ನು ತೆಗೆದುಕೊಳ್ಳಲು ಟೈಲರ್ ಬಳಿ ಕರೆದೊಯ್ಯುತ್ತಿರುವುದಾಗಿ ಪತ್ನಿಗೆ ತಿಳಿಸಿ ಕಚೇರಿಯಲ್ಲಿಯೇ ಇರಲು ಮನವೊಲಿಸಿದ್ದಾನೆ. ಚಂದ್ರಕಿಶೋರ್ ಇಬ್ಬರು ಮಕ್ಕಳನ್ನು ನೇರ ಮನೆಗೆ ಕರೆದುಕೊಂಡು ಹೋಗಿದ್ದಾನೆ.