ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋದಲ್ಲಿ ಹುದ್ದೆಗೆ ಆಹ್ವಾನಿಸಿರುವ ಅರ್ಜಿಯಲ್ಲಿ ಕನ್ನಡಿಗರನ್ನು ಬಿಟ್ಟು ಅನ್ಯ ಭಾಷಿಕರಿಗೆ ಉದ್ಯೋಗ ಪಡೆಯಲು ಅನುಕೂಲ ಕಲ್ಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮವು 50 ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಕರೆದಿದೆ. ಅರ್ಜಿ ಸಲ್ಲಿಕೆಯ ನಿಬಂಧನೆಯಲ್ಲಿ 38 ಗರಿಷ್ಠ ವಯಸ್ಸಿನ ಮೂರು ವರ್ಷ ಅನುಭವ ಇರುವವರಿಗೆ ಅವಕಾಶ ನೀಡಲಾಗಿದೆ. ಕನ್ನಡ ಅರ್ಥೈಸಿಕೊಳ್ಳಲು, ಓದಲು, ಬರೆಯಲು ಬರುವವರಿಗೆ ಅವಕಾಶವಿದೆ. ಜೊತೆಗೆ ಬಾರದವರಿಗೆ ಒಂದು ವರ್ಷ ಕಾಲ ಅವಕಾಶವಿದ್ದು, ಅಷ್ಟರಲ್ಲಿ ಕನ್ನಡ ಕಲಿಯಬೇಕು. ಬಳಿಕ ಬಿಎಂಆರ್‌ಸಿಎಲ್ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣ ಆಗಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಬಿಎಂಆರ್‌ಸಿಎಲ್ ಮಾನವ ಸಂಪನ್ಮೂಲ ವಿಭಾಗದಲ್ಲಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಅಧಿಕಾರಿಗಳಿದ್ದು, ತಮ್ಮವರಿಗೆ ಅನುಕೂಲ ಮಾಡಿಕೊಡಲು ಈ ರೀತಿ ಅರ್ಜಿ ಕರೆದಿದ್ದಾರೆ. ಹೀಗಾಗಿ ತಕ್ಷಣ ಈ ನೇಮಕಾತಿ ಸುತ್ತೋಲೆಯನ್ನು ಹಿಂಪಡೆದು ಕನ್ನಡಿಗರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕೊಡಬೇಕು ಎಂದು ಬಿಎಂಆರ್‌ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಹೇಳಿದ್ದಾರೆ.