ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೋದ ಮಹತ್ವದ ಯೋಜನೆಗಳಲ್ಲಿ ಒಂದಾದ ಚಂದ್ರಯಾನ-5 ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ ನೀಡಿದ್ದಾರೆ.
ಚಂದ್ರಯಾನ-5 ಮಿಷನ್ ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು 250 ಕೆಜಿ ತೂಕದ ರೋವರ್ ಅನ್ನು ಹೊತ್ತೊಯ್ಯಲಿದೆ ಎಂದು ನಾರಾಯಣನ್ ಹೇಳಿದ್ದಾರೆ.
ಮೂರು ದಿನಗಳ ಹಿಂದೆಯಷ್ಟೇ ನಮಗೆ ಚಂದ್ರಯಾನ-5 ಮಿಷನ್‌ಗೆ ಅನುಮೋದನೆ ಸಿಕ್ಕಿತು. ನಾವು ಜಪಾನ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
2027ರಲ್ಲಿ ಉಡಾವಣೆಯಾಗುವ ನಿರೀಕ್ಷೆಯಲ್ಲಿರುವ ಚಂದ್ರಯಾನ-4 ಮಿಷನ್ ಚಂದ್ರನಿಂದ ಸಂಗ್ರಹಿಸಿದ ಮಾದರಿಗಳನ್ನು ತರುವ ಗುರಿ ಹೊಂದಿದೆ. ಬಾಹ್ಯಾಕಾಶದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.