ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್ ಮಾರ್ಕೆಟ್‍ನ ಬಿಜಿಎಸ್ ಫ್ಲೈಓವರ್ ಮೇಲೆ ತಡರಾತ್ರಿ ಇನ್ನೋವಾ ಕಾರೊಂದು ಅತೀ ವೇಗವಾಗಿ ಬಂದು ಆಟೋಗೆ ಡಿಕ್ಕಿಯಾದ ಘಟನೆ ನಡೆದಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಆಟೋ ಚಾಲಕನ ಕಾಲು ಮುರಿದಿದೆ. ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಆಟೋ ಚಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಚಾಮರಾಜಪೇಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ಪತ್ತೆಗೆ ಪೊಲೀಸರು ಇದೀಗ ಕ್ರಮಕೈಗೊಂಡಿದ್ದಾರೆ.