ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಕಂಬ ತಲೆ ಮೇಲೆ ಬಿದ್ದು 4 ತಿಂಗಳ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಗರದ ಸದ್ದುಗುಂಟೆ ಪಾಳ್ಯದಲ್ಲಿ ನಡೆದಿದೆ.
ಸೋಮವಾರ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಮೃತಪಟ್ಟಿದ್ದಾರೆ. ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಕರೆದುಕೊಂಡು ಬರಲು ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿ ನಡೆಯುವ ವೇಳೆ ಬೆಳಿಗ್ಗೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿತ್ತು. ಸಂಜೆ ಕಂಬ ಮಹಿಳೆಯರ ಮೇಲೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬೈಯಪ್ಪನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜರಸ್ತೆ ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.