ಮಹಿಳೆ ಮೇಲೆ ಹಲ್ಲೆ ಮಾಡಿದ್ರಾ ಮಾಜಿ ಸಚಿವ ಎಚ್‌.ಎಂ. ರೇವಣ್ಣ? ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್​.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ​ಕಾಂಗ್ರೆಸ್​ ಕಾರ್ಯಕರ್ತೆ ನಂದಿನಿ ನಾಗರಾಜ್ ಆರೋಪಿಸಿದ್ದಾರೆ. ಈ ಸಂಬಂಧ ಹೆಚ್​ಎಂ ರೇವಣ್ಣ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತೆ ನಂದಿನಿ ನಾಗರಾಜ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ಓದಗಿಸುವಂತೆ ನಂದಿನಿಗೆ ನೋಟಿಸ್ ನೀಡಿದ್ದಾರೆ.

ಆ ಮಹಿಳೆ ಯಾರು ಅನ್ನೋದನ್ನೂ ನಾನು ನೋಡಿಲ್ಲ. ಪದೇ ಪದೇ ರಾಹುಲ್ ಗಾಂಧಿ ಎಂದು ಹೇಳುತ್ತಿದ್ದಳು. ಕೊಲೆ ಮಾಡಲು ಬಂದಿದ್ದರು, ಹೊಡೆದರು ಅನ್ನೋದು ಸರಿಯಲ್ಲ. ವಿಡಿಯೋ ಮಾಡಬೇಡಮ್ಮ ಅಂತಾ ಮೊಬೈಲ್​ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!