Thursday, January 29, 2026
Thursday, January 29, 2026
spot_img

ವಿಶಾಖಪಟ್ಟಣದಲ್ಲಿ ಕಿವೀಸ್ ವೇಗಿ ಕಮಾಲ್: ಮ್ಯಾಟ್ ಹೆನ್ರಿಗೆ ವಿಶ್ವ ದಾಖಲೆಯ ಗರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಭಾರತ ಹಾಗೂ ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಕಿವೀಸ್ ವೇಗಿ ಮ್ಯಾಟ್ ಹೆನ್ರಿ ಪಾಲಿಗೆ ಐತಿಹಾಸಿಕವಾಗಿ ಮಾರ್ಪಟ್ಟಿದೆ. ವಿಶಾಖಪಟ್ಟಣದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ವಿಕೆಟ್ ಪಡೆಯುವ ಮೂಲಕ ಹೆನ್ರಿ ವಿಶ್ವ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್‌ಗಳನ್ನು ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಔಟ್ ಮಾಡಿದ ಮೊದಲ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರದ ಬೌಲರ್ ಎಂಬ ಹೆಗ್ಗಳಿಕೆಗೆ ಹೆನ್ರಿ ಪಾತ್ರರಾಗಿದ್ದಾರೆ.

ಜನವರಿ 25 ರಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಮೊದಲ ಎಸೆತದಲ್ಲೇ ಪೆವಿಲಿಯನ್‌ಗೆ ಅಟ್ಟಿದ್ದರು.

ಇದೀಗ ನಾಲ್ಕನೇ ಪಂದ್ಯದಲ್ಲಿ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರನ್ನು ಮೊದಲ ಎಸೆತದಲ್ಲೇ ಔಟ್ ಮಾಡುವ ಮೂಲಕ ಈ ಅಪರೂಪದ ಸಾಧನೆ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !