ಪ್ರಧಾನಿ ಮೋದಿ ಭೇಟಿಯಾದ ಸಂಗೀತ ಸಂಯೋಜಕ ಇಳಯರಾಜ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಅವರು ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

ರಾಜ್ಯಸಭಾ ಸಂಸದರೂ ಆದ ಇಳಯರಾಜ ಲಂಡನ್‌ನಲ್ಲಿ ರಾಯಲ್‌ ಪಿಲ್ಹಾರ್ಮೋನಿಕ್‌ ಆರ್ಕೆಸ್ಟ್ರಾ ತಂಡದೊಂದಿಗೆ ಜಾಗತಿಕವಾಗಿ ಸಂಗೀತ ಮೇಳ ಕಾರ್ಯಕ್ರಮ ಪ್ರದರ್ಶನ ಕೈಗೊಂಡು ಇತಿಹಾಸ ಸೃಷ್ಟಿಸಿದ್ದರು. ಈ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ಸಂಗೀತ ಮತ್ತು ಸಂಸ್ಕೃತಿಯ ಮೇಲೆ ಅದ್ಭುತವಾದ ಪ್ರಭಾವ ಬೀರುವ ಸಂಗೀತದ ದಿಗ್ಗಜ, ರಾಜ್ಯಸಭಾ ಸಂಸದ ಇಳಯರಾಜ ಅವರನ್ನು ಭೇಟಿಯಾದದ್ದು ಸಂತೋಷವಾಗಿದೆ ಎಂದಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಲಂಡನ್‌ನ ಪಾಶ್ಚಿಮಾತ್ಯ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ. ಅವರ ಸಂಗೀತ ಸಾಧನೆಯ ಹಾದಿಯಲ್ಲಿ ಇದು ಮತ್ತೊಂದು ಅಧ್ಯಾಯ. ವಿಶ್ವಮಟ್ಟದಲ್ಲೇ ಸದ್ದು ಮಾಡುತ್ತಿದೆ ಎಂದು ಪ್ರಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

ಮತ್ತೊಂದೆಡೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಇಳಯರಾಜ, ಇಂದು ಪ್ರಧಾನಿ ಮೋದಿ ಭೇಟಿಯಾಗಿದ್ದು, ನನಗೆ ಭಾರೀ ಸಂತೋಷವನ್ನುಂಟು ಮಾಡಿದೆ. ಲಂಡನ್‌ನಲ್ಲಿ ನಡೆದ ಸಂಗೀತ ಕಾರ್ಯಕ್ರಮ ಸೇರಿದಂತೆ ಬೇರೆ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!