ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಕಳ್ಳಸಾಗಾಣಿಕೆ ಪತ್ತೆ ಹಚ್ಚಿದ ಬೆನ್ನಲ್ಲೇ DRI ಅಧಿಕಾರಿಗಳು ಡ್ರಗ್ಸ್ ಸಾಗಾಣಿಕೆ ವಿರುದ್ಧ ಬಲೆ ಬಿಸಿದ್ದಾರೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೊಬ್ಬರಿ 38.4 ಕೋಟಿ ರೂ. ಮೌಲ್ಯದ 3.2 ಕೆಜಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಘಾನಾ ಮೂಲದ ಜೆನ್ನಿಫರ್ ಅಬ್ಬೇ ಎಂಬುವರು ಕತಾರ್ನ ದೋಹಾದಿಂದ ಬೆಂಗಳೂರಿಗೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಕೊಕೇನ್ ಡ್ರಗ್ಸ್ ಪತ್ತೆಯಾಗಿದೆ.
ಕೂಡಲೇ ಡಿಆರ್ಐ ಅಧಿಕಾರಿಗಳು ಅಬ್ಬೇಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.