ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ : ಸಚಿವ ಶಿವಾನಂದ ಪಾಟೀಲ

ಹೊಸದಿಗಂತ ವರದಿ ಹಾವೇರಿ:

ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸ್ವಾತಿ ಹತ್ಯೆ ಪ್ರಕರಣ ವಿವರಿಸಿ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಅಪರಾಧಿಗಳು ಶಿಕ್ಷೆಯಿಂದ ಪಾರಾಗುವ ಅವಕಾಶ ನೀಡುವುದಿಲ್ಲ.
ಹತ್ಯೆಗೀಡಾದ ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದು, ಹತ್ಯೆ ಮಾಡಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಪ್ರಕರಣವನ್ನು ದುರ್ಬಲಗೊಳಿಸದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಣೆಬೆನ್ನೂರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ ಬ್ಯಾಡಗಿ ಅವರು ಮಾರ್ಚ್ 2ರಂದು ಕೆಲಸಕ್ಕೆ ಹೋದವರು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ನಾಪತ್ತೆ ದೂರು ದಾಖಲು ಮಾಡಿದ್ದರು. ಮಾರ್ಚ್ 6ರಂದು ರಾಣೆಬೆನ್ನೂರು ತಾಲೂಕಿನ ಪತ್ಯಾಪುರ ಬಳಿ ತುಂಗಭದ್ರಾ ನದಿ ದಡದಲ್ಲಿ ಶವ ಪತ್ತೆಯಾಗಿತ್ತು. ಪೊಲೀಸರು ತನಿಖೆ ಕೈಗೊಂಡಾಗ ಈ ಶವ ನಾಪತ್ತೆಯಾಗಿದ್ದ ಸ್ವಾತಿ ಅವರದ್ದು. ಅವರನ್ನು ಹತ್ಯೆ ಮಾಡಿ ನದಿಗೆ ಎಸೆಯಲಾಗಿದೆ ಎನ್ನುವುದು ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!