ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾದ ದೇರ್ ಅಲ್-ಬಾಲಾಹ್ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಓರ್ವ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ .
ಈ ಕುರಿತು ಗಾಜಾದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಮೇಲಿನ ದಾಳಿಯಲ್ಲಿ ಓರ್ವ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾರೆ ಎಬಂದು ಹೇಳಿದೆ.
ಆದರೆ ವಿಶ್ವಸಂಸ್ಥೆಯ ಕಾಂಪೌಂಡ್ ಮೇಲಿನ ದಾಳಿಯನ್ನು ಇಸ್ರೇಲ್ ಮಿಲಿಟರಿ ನಿರಾಕರಿಸಿದ್ದು, ಉತ್ತರ ಗಾಜಾದಲ್ಲಿನ ಹಮಾಸ್ ತಾಣವನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ.