ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ಬುಧವಾರ ವಕ್ಫ್ (ತಿದ್ದುಪಡಿ) ಮಸೂದೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.
ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಸೂದೆ ಮಂಡಿಸಿದರು. ವಕ್ಫ್ (ತಿದ್ದುಪಡಿ) ಮಸೂದೆ, 2024 ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿದೆ ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿದೆ ಎಂದು ತಿಳಿಸಿದ್ದಾರೆ.
ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ಇದು ಕರ್ನಾಟಕದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು.
ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವಂತೆ ಈ ಸದನವು ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ ಎಂದು ಹೆಚ್.ಕೆ ಪಾಟೀಲ್ ಅವರು ಹೇಳಿದರು.