ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ನಟ ಪ್ರಭಾಸ್ ತೆಲುಗಿನ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ‘ಕಲ್ಕಿ 2898 ಎಡಿ’ ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಹೌದು, ಈ ವರ್ಷದ ಅಂತ್ಯದಲ್ಲಿ ‘ಕಲ್ಕಿ ಪಾರ್ಟ್ 2’ ಶುರು ಆಗುವ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಈಗಾಗಲೇ ಪ್ರಭಾಸ್, ದೀಪಿಕಾ, ಬಿಗ್ ಬಿ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಸಕ್ಸಸ್ ಕಂಡಿದೆ. ಇದರ ಸೀಕ್ವೆಲ್ ಇದೇ ಡಿಸೆಂಬರ್‌ನಲ್ಲಿ ಶೂಟಿಂಗ್ ಆರಂಭ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಕಳೆದ ವರ್ಷ ಜೂನ್‌ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು. ಈಗ ಇದರ ಸೀಕ್ವೆಲ್‌ಗೆ ಸಿದ್ಧತೆ ನಡೆಯುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.