WEATHER | ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗಿದೆ. ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 25ರಿಂದ ಮಳೆಯಾಗಲಿದೆ.

ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!