ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಮಗು ಹಠ ಮಾಡುತ್ತಿತ್ತು ಎಂದು ಮಗುವಿನ ಕೈ ಮೇಲೆ ಬರೆಹಾಕಿ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ದೀಕ್ಷಿತ್ (2.5 ವರ್ಷ) ಸಂತ್ರಸ್ತ ಬಾಲಕ. ಮಗುವಿನ ಪೋಷಕರಾದ ರಮೇಶ್ ನಾಯಕ್, ಪತ್ನಿ ಚೈತ್ರಾಬಾಯಿ ತಮ್ಮ ಮಗುವನ್ನು ಕರೆದುಕೊಂಡು ಬರಲು ಅಂಗನವಾಡಿಗೆ ತೆರಳಿದ್ದಾರೆ. ಆಗ ಬಾಲಕ ಅಳುತ್ತಿರುವುದನ್ನು ಗಮನಿಸಿದ್ದಾರೆ. ಏನಾಯ್ತು ಎಂದು ವಿಚಾರಿಸಿದಾಗ, ಈ ಘಟನೆ ಬೆಳಕಿಗೆ ಬಂದಿದೆ.
ಅಂಗನವಾಡಿ ಸಹಾಯಕಿ ಚಂದ್ರಮ್ಮ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮಗುವಿನ ತಂದೆ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಸಿಬ್ಬಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.