ಹೊಸದಿಗಂತ ಡಿಜಿಟಲ್ ಡೆಸ್ಕ್:
ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಹನಿಟ್ರ್ಯಾಪ್ನಂಥ ಕೃತ್ಯಕ್ಕೆ ಕುಮ್ಮಕ್ಕು ಕೊಟ್ಟವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ ಕೆಲವು ಮಂದಿ ನಾಯಕರು ಆಗ್ರಹಿಸಿದ್ದರು.
ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವ ಜಿಪರಮೇಶ್ವರ ಉತ್ತರಿಸಿದ್ದಾರೆ. ಅಲ್ಲದೆ ತನಿಖೆಗೆ ಆದೇಶಿಸುವುದಾಗಿಯೂ ಭರವಸೆ ನೀಡಿದ್ದಾರೆ.