ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಲು ಸಚಿವರ ವಿರುದ್ಧದ ಹನಿಟ್ರ್ಯಾಪ್ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಒತ್ತಾಯಿಸಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶುಕ್ರವಾರ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಚುನಾಯಿತ ಪ್ರತಿನಿಧಿಗಳು ಆರೋಪಿಸಿರುವ ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ನಾನು ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.
ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿ ಟ್ರ್ಯಾಪ್ ಯತ್ನ ನಡೆದಿದೆ ಎಂದು ಆರೋಪಿಸಿದಾಗ ಶುಕ್ರವಾರ ವಿಧಾನಸಭೆಯಲ್ಲಿ ಗದ್ದಲ ಉಂಟಾಯಿತು.