ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರಿಸ್ ಪಂಜಾಬ್ ದೇ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್‌ನ ಏಳು ಸಹಚರರನ್ನು ಶುಕ್ರವಾರ ಅಮೃತಸರದ ಅಜ್ನಾಲಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು ಮಾರ್ಚ್ 25 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಏಳು ಜನರನ್ನು ಈ ಹಿಂದೆ ಅಸ್ಸಾಂನ ದಿಬ್ರುಗಢ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಆದರೆ ಪಂಜಾಬ್ ಪೊಲೀಸರು ಬೇರೊಂದು ಪ್ರಕರಣದಲ್ಲಿ ಇವರನ್ನು ಬಂಧಿಸಿದ್ದರು. ಬಂಧಿತ ಏಳು ಜನರನ್ನು ಅಜ್ನಾಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2023 ರಲ್ಲಿ ಅಮೃತಸರದ ಹೊರವಲಯದಲ್ಲಿರುವ ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಅವರನ್ನು ಮತ್ತೆ ಬಂಧಿಸಿದ್ದಾರೆ.
ಅಮೃತ್‌ಪಾಲ್ ಸಿಂಗ್ ಖಲಿಸ್ತಾನಿ ನಾಯಕ ಹಾಗೂ ವಾರಿಸ್ ಪಂಜಾಬ್ ದೇ ಮುಖ್ಯಸ್ಥ. ಸದ್ಯ ಈತ ಜೈಲಿನಲ್ಲಿದ್ದಾನೆ. ಅಮೃತ್‌ಪಾಲ್ ಸಿಂಗ್ ಮತ್ತು ಆತನ ಒಂಬತ್ತು ಸಹಚರರು ಕಳೆದ ಎರಡು ವರ್ಷಗಳಿಂದ ಎನ್‌ಎಸ್‌ಎ ಅಡಿಯಲ್ಲಿ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿದ್ದಾರೆ. ಜೈಲಿನಲ್ಲಿದ್ದುಕೊಂಡೇ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಖದೂರ್ ಸಾಹಿಬ್ ಕ್ಷೇತ್ರದಿಂದ ಅಮೃತ್‌ಪಾಲ್ ಸಿಂಗ್ ಗೆಲುವನ್ನು ಸಾಧಿಸಿದ್ದನು.