ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯ ನಿರ್ಮಿಸಲಾಗುವುದು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.
ದೇಶಾದ್ಯಂತ ಮತ್ತು ವಿದೇಶಗಳಲ್ಲಿಯೂ ವೆಂಕಟೇಶ್ವರ ಸ್ವಾಮಿ ದೇಗುಲ ನಿರ್ಮಾಣಕ್ಕೆ ಭಕ್ತರು ಬೇಡಿಕೆಯಿಡುತ್ತಿದ್ದಾರೆ. ಎಲ್ಲಾ ರಾಜ್ಯಗಳ ರಾಜಧಾನಿಯಲ್ಲೂ ವೆಂಕಟೇಶ್ವರ ದೇಗುಲ ನಿರ್ಮಾಣ ಮಾಡುತ್ತೇವೆ ಎಂದರು.
ತಿರುಪತಿ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಸದ್ಯ ಅಲ್ಲಿ ಇತರ ಸಮುದಾಯದವರು ಕೆಲಸ ಮಾಡುತ್ತಿದ್ದರೆ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.