ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ತಮಿಳುನಾಡಿನ ಹಕ್ಕುಗಳನ್ನು ಇತರ ರಾಜ್ಯಗಳಿಗೆ ನೀಡಿದೆ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಕಪ್ಪು ಬಾವುಟಗಳೊಂದಿಗೆ ಪ್ರತಿಭಟನೆ ನಡೆಸಿತು.
ರಾಜ್ಯ ಪಕ್ಷದ ಮುಖ್ಯಸ್ಥ ಕೆ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ನಾಯಕರು ಸ್ಟಾಲಿನ್ ಸರ್ಕಾರದ ವಿರುದ್ಧ ಕಪ್ಪು ಬಾವುಟಗಳು ಮತ್ತು ಫಲಕಗಳನ್ನು ಪ್ರದರ್ಶಿಸಿದರು. ಮೇಕೆದಾಟು ಯೋಜನೆಯ ವಿಷಯಕ್ಕೆ ಸಂಬಂಧಿಸಿದಂತೆ ಅವರು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದರು.
ಕರ್ನಾಟಕ ಸರ್ಕಾರದ ಪರವಾಗಿ ಗಡಿ ನಿರ್ಣಯದ ಮೊದಲ ಸಭೆಯಲ್ಲಿ ಭಾಗವಹಿಸಲು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬೆಳಿಗ್ಗೆ ಚೆನ್ನೈಗೆ ಆಗಮಿಸಿದರು.