ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹಕಾರ ಸಚಿವ ಕೆಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಆರೋಪ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿರುವ ಪರಿಷತ್ ಸದಸ್ಯ ರಾಜೇಂದ್ರ ಅವರು, ದಾಖಲೆ ಸಹಿತ ಮಾಹಿತಿ ಸಲ್ಲಿಸಿದ್ದಾರೆ.
ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಪುತ್ರ ಹಾಗೂ ಪರಿಷತ್ ಸದಸ್ಯ ರಾಜೇಂದ್ರ ಅವರು, ಹನಿಟ್ರ್ಯಾಪ್ ಯತ್ನ ಆರೋಪದ ದಾಖಲೆ ಸಹಿತ ಮಾಹಿತಿ ನೀಡಿದರು.