ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಭಾರೀ ಸದ್ದು ಮಾಡುತ್ತಿದ್ದು, ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಇದು ಕಾಂಗ್ರಸ್ನಲ್ಲಿ ಸಂಚಲನ ಮೂಡಿಸಿದೆ.
ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮಿಸಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸ್ವತಃ ಖರ್ಗೆ ಅವರೇ ಬಂದು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಇದೀಗ ಹಲವು ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಖರ್ಗೆ ಸಿಎಂ ಅವರಿಗೆ ಹಾರೈಸಿದ್ದಾರೆ. ಇದೇ ನೆಪದಲ್ಲಿ ರಾಜಣ್ಣ ಅವರ ಹನಿಟ್ರ್ಯಾಪ್ ಆರೋಪದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.