ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆಪಾಕ್ನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ಮುಖಾಮುಖಿಯಾಗಿವೆ.
ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಸಿಎಸ್ಕೆ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದಾರೆ. ಇತ್ತ ಮುಂಬೈ ಇಂಡಿಯನ್ಸ್ ತಂಡದ ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ಕಳೆದ ವರ್ಷದ ಸ್ಲೋ ಓವರ್ ರೇಟ್ ಉಲ್ಲಂಘನೆಗೆ ಶಿಕ್ಷೆಯಾಗಿ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ನಮನ್ ಧೀರ್, ರಾಬಿನ್ ಮಿಂಜ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಸತ್ಯನಾರಾಯಣ ರಾಜು
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ದೀಪಕ್ ಹೂಡಾ, ಶಿವಂ ದುಬೆ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಎಂಎಸ್ ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ನೇಥನ್ ಎಲ್ಲಿಸ್, ಖಲೀಲ್ ಅಹ್ಮದ್.