ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲದ ಕೆಲವು ಪ್ರದೇಶಗಳಲ್ಲಿ ಮಳೆ ಅಥವಾ ಲಘು ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೊಸ ಪಾಶ್ಚಿಮಾತ್ಯ ವಾಯುಭಾರ ಕುಸಿತವು ಮಾರ್ಚ್ 24 ರಿಂದ 28 ರವರೆಗೆ ಸಕ್ರಿಯವಾಗಿರುತ್ತದೆ. ಹೀಗಾಗಿ ದೆಹಲಿ-ಎನ್ಸಿಆರ್ನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯು ಗಂಟೆಗೆ 20 ರಿಂದ 30 ಕಿಲೋಮೀಟರ್ ವೇಗದಲ್ಲಿ ಬೀಸಬಹುದು ಎನ್ನಲಾಗಿದೆ.
ಮತ್ತೊಂದೆಡೆ, ಜಾರ್ಖಂಡ್, ಪಶ್ಚಿಮ ಬಂಗಾಳ, ಈಶಾನ್ಯ ಭಾರತ ಮತ್ತು ಒಡಿಶಾ ಸೇರಿದಂತೆ ಅಂಡಮಾನ್ ಮತ್ತು ನಿಕೋಬಾರ್ಗೂ ಇದೇ ರೀತಿಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 2-3 ದಿನಗಳವರೆಗೆ ಈಶಾನ್ಯ ಭಾರತದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.