ಯುನಿಫಾರ್ಮ್‌ ಟೈಟ್‌ ಆಗ್ತಿದೆ! ಶಾಲಾ ಮಕ್ಕಳ ಬೊಜ್ಜಿನ ಸಮಸ್ಯೆ ನಿವಾರಿಸೋಕೆ ಶಿಕ್ಷಣ ಇಲಾಖೆ ಸ್ಟ್ರಿಕ್ಟ್‌ ರೂಲ್ಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳಲ್ಲಿ ಬೊಜ್ಜಿನ ಪ್ರಮಾಣವು ಹೆಚ್ಚುತ್ತಿರುವುದು ಗಂಭೀರ ಚಿಂತನೆಯ ವಿಷಯವಾಗಿದೆ. ಈ ಸಮಸ್ಯೆಯನ್ನು ತಗ್ಗಿಸಲು, ಶಾಲಾ ಶಿಕ್ಷಣ ಇಲಾಖೆ ಮಕ್ಕಳ ಆಹಾರದಲ್ಲಿ ಎಣ್ಣೆಯ ಪ್ರಮಾಣವನ್ನು ಶೇಕಡಾ 10 ರಷ್ಟು ಕಡಿತಗೊಳಿಸುವ ಮಹತ್ವದ ಕ್ರಮ ಕೈಗೊಂಡಿದೆ.

ಆಧುನಿಕ ಜೀವನಶೈಲಿಯಲ್ಲಿ ಮಕ್ಕಳು ದೈಹಿಕ ಚಟುವಟಿಕೆಗಳನ್ನು ಮರೆತು, ಒಳಾಂಗಣ ಆಟಗಳು ಮತ್ತು ತಂತ್ರಜ್ಞಾನದಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಇದರ ಜೊತೆಗೆ, ಅತಿಯಾದ ಬೇಕರಿ ಉತ್ಪನ್ನಗಳ ಸೇವನೆ, ಫಾಸ್ಟ್ ಫುಡ್‌ಗೆ ಒಲವು ಹಾಗೂ ಆಹಾರದಲ್ಲಿ ಎಣ್ಣೆಯುಕ್ತ ಪದಾರ್ಥಗಳ ಅತಿಯಾದ ಬಳಕೆಯೂ ಸಮಸ್ಯೆಗೆ ಪೂರಕವಾಗಿದೆ.

ಈ ಸಮಸ್ಯೆಗೆ ಪರಿಹಾರವಾಗಿ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೆ ಬಳಸುವ ಅಡುಗೆ ಎಣ್ಣೆಯ ಪ್ರಮಾಣವನ್ನು ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅನ್ವಯಿಸುತ್ತದೆ. ಈ ಮೂಲಕ ಮಕ್ಕಳ ಆಹಾರದಲ್ಲಿ ಕೊಬ್ಬಿನ ಅಂಶವನ್ನು ನಿಯಂತ್ರಿಸಿ, ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಗುರಿಯನ್ನು ಇಲಾಖೆ ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!