ಸಂವಿಧಾನ ಬದಲಿಸುತ್ತೇವೆ ಅಂದಿದ್ದಕ್ಕೆ ಹೈಕಮಾಂಡ್ ನಿಂದ ಫೋನ್: ಏನಂದ್ರು ಡಿಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಸಿಎಂ ಡಿಕೆ ಶಿವಕುಮಾರ್ ‘ಸಂವಿಧಾನ ಬದಲಿಸಲಾಗುವುದು’ ಎಂಬ ಹೇಳಿಕೆ ನೀಡಿರುವುದು ದೊಡ್ಡ ವಿವಾದವನ್ನು ಹುಟ್ಟುಹಾಕಿದೆ.

ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇ. 04 ರಷ್ಟು ಮೀಸಲಾತಿ ವಿಚಾರವಾಗಿ ಮಾತನಾಡುತ್ತಾ, ಅಲ್ಪಸಂಖ್ಯಾತರಿಗೆ ಕೋಟಾ ನೀಡಲು ಬದಲಾವಣೆಗಳನ್ನು ಮಾಡಲಾಗುವುದು ಎಂದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ​​ ಡಿಸಿಎಂ ಡಿಕೆ ಶಿವಕುಮಾರ್​ ಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸಂವಿಧಾನ ಬದಲಿಸುವ ಬಗ್ಗೆ ನಾನು ಮಾತನಾಡಲಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಹೈಕಮಾಂಡ್​ಗೆ ವಿವರಣೆ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!