ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿರುವ ಹನಿಟ್ರ್ಯಾಪ್ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಒಟ್ಟು 48 ಗಣ್ಯರು ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ ಎಂಬ ಆರೋಪ ಇದೆ. ಹೀಗಾಗಿ ನಾವು ಸಲ್ಲಿಸುತ್ತಿರುವ ಸಾರ್ವಜನಿಕ ಹಿತಾಸಕ್ತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪಿಐಎಲ್ ಸಲ್ಲಿಸಿದ ವ್ಯಕ್ತಿ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿಕೊಂಡರು.
ಗಂಭೀರವಾಗಿ ಪರಿಗಣಿಸಿರುವ ನ್ಯಾಯಮೂರ್ತಿ ಖನ್ನಾ ನೇತೃತ್ವದ ಪೀಠ, ವಿಚಾರಣೆ ನಡೆಸಲು ಒಪ್ಪಿಕೊಂಡಿದೆ. ಸುಪ್ರೀಂಕೋರ್ಟ್ ಸಿಜೆಐ ಸಂಜೀವ್ ಖನ್ನಾ ಅವರು ಈ ಕುರಿತು ನಾಳೆ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ. ನಾಳೆ ನಡೆಯುವ ಈ ವಿಚಾರಣೆ ಮತ್ತು ಪಿಐಎಲ್ ಬಗ್ಗೆ ಸುಪ್ರೀಂಕೋರ್ಟ್ ಮುಂದೇನು ಮಾಡಬಹುದು ಅನ್ನೋ ವಿಚಾರ ಕುತೂಹಲ ಕೆರಳಿಸಿದೆ.