ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಪರವಾಗಿ ಕೆ.ಎಲ್ ರಾಹುಲ್ ಅವರು ಅಖಾಡಕ್ಕೆ ಧುಮುಕುತ್ತಾರೆ ಎಂದು ಹೇಳಲಾಗಿತ್ತು. ಆದರೆ ತಂಡದ ಆರಂಭಿಕ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಗೈರಾಗಿದ್ದು, ಇದಕ್ಕೆ ಕಾರಣ ಕೆ.ಎಲ್ ರಾಹುಲ್ ಹಾಗೂ ಅತಿಯಾ ಶೆಟ್ಟಿ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಿಂದ ಸ್ಪೆಷಲ್ ಪರ್ಮಿಷನ್ ಪಡೆದುಕೊಂಡು ರಾಹುಲ್ ಭಾನುವಾರ ರಾತ್ರಿಯೇ ಮುಂಬೈಗೆ ತೆರಳಿದ್ದಾರೆ.
ಕೆ.ಎಲ್ ರಾಹುಲ್ ಪತ್ನಿ ಅತಿಯಾ ಶೆಟ್ಟಿ ಅವರು ಯಾವ ಸಮಯದಲ್ಲಾದರೂ ಮೊದಲ ಮಗುವಿಗೆ ಜನ್ಮ ನೀಡಬಹುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ಅಪ್ಪ ಆಗುವ ಖುಷಿಯಲ್ಲಿರುವ ಕೆ.ಎಲ್ ರಾಹುಲ್ ಅವರು ಪತ್ನಿ ಜೊತೆ ಇದ್ದು ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ.
ರಾಹುಲ್ ಕೆಲವು ತಿಂಗಳ ಹಿಂದೆ ತಮ್ಮ ಪತ್ನಿ ಗರ್ಭಿಣಿಯಾಗಿದ್ದು, ಇಬ್ಬರೂ ಶೀಘ್ರದಲ್ಲೇ ಪೋಷಕರಾಗಲಿದ್ದಾರೆ ಎಂಬ ಮಾಹಿತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.