ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಬಿಗ್‌ಬಾಸ್ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್‌ರನ್ನು ಮಧ್ಯಾಹ್ನ ಅರೆಸ್ಟ್ ಮಾಡಿ ಮಧ್ಯರಾತ್ರಿ ರಿಲೀಸ್ ಮಾಡಲಾಗಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿದೆ.
ಇಬ್ಬರೂ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಸಿನಿಮೀಯ ಶೈಲಿಯಲ್ಲಿ ವೀಡಿಯೋ ಮಾಡಿ ಪೋಸ್ಟ್ ಮಾಡಿದ್ದರು. ಬಸವೇಶ್ವರ ನಗರ ಪೊಲೀಸರು ಇಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಬಳಿಕ ಇಬ್ಬರನ್ನೂ ಬಂಧನಕ್ಕೆ ಒಳಪಡಿಸಲಾಗಿತ್ತು ಎನ್ನಲಾಗಿದೆ.
ನಿನ್ನೆ ಮಧ್ಯಾಹ್ನ ಬಂಧಿಸಿ, ಮಧ್ಯರಾತ್ರಿ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದ್ದು, ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಂಧನ ಮಾಡಿದ ಬಳಿಕ ಸ್ಟೇಷನ್ ಬೇಲ್ ಕೊಡಬೇಕು, ಇಲ್ಲದೇ ಹೋದರೆ ಕೋರ್ಟ್ ಬೇಲ್ ಆಗಬೇಕು. ತಡರಾತ್ರಿ ನೋಟಿಸ್ ಕೊಟ್ಟು ಆರೋಪಿಗಳಾದ ವಿನಯ್, ರಜತ್‌ನನ್ನ ಪೊಲೀಸರು ಕಳುಹಿಸಿದ್ದಾರೆ ಎನ್ನಲಾಗಿದ್ದು, ಇದು ಹೇಗೆ ಎನ್ನುವ ಪ್ರಶ್ನೆ ಜನರಲ್ಲಿ ಕಾಡಿದೆ.