ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮಹಿಳಾ ಕ್ರಿಕೆಟ್ ತಂಡದ ಬಿಸಿಸಿಐ ಕೇಂದ್ರೀಯ ಗುತ್ತಿಗೆ ಪ್ರಕಟವಾಗಿದೆ. ಈ ಬಾರಿಯೂ ಕೂಡ ನಾಯಕಿ ಹರ್ಮನ್‌ಪ್ರೀತ್ ಕೌರ್, ಉಪನಾಯಕಿ ಸ್ಮೃತಿ ಮಂಧನಾ ಹಾಗೂ ಆಲ್ ರೌಂಡರ್ ದೀಪ್ತಿ ಶರ್ಮಾ ‘ಎ’ ಗ್ರೇಡ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ವೇಗಿ ರೇಣುಕಾ ಸಿಂಗ್ ಠಾಕೂರ್, ಅನುಭವಿ ಆಲ್ರೌಂಡರ್ ಜಿಮಿಯಾ ರೋಡ್ರಿಗ್ಸ್, ವಿಕೆಟ್ ಕೀಪರ್ ರಿಚಾ ಘೋಷ್ ಹಾಗೂ ಆರಂಭಿಕ ಬ್ಯಾಟರ್ ಶಫಾಲಿ ವರ್ಮಾ ‘ಬಿ’ ಗ್ರೇಡ್‌ನಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದ ಮತ್ತೋರ್ವ ಯುವ ಸ್ಪಿನ್ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಇದೇ ಮೊದಲ ಬಾರಿಗೆ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೇಯಾಂಕಾ ಪಾಟೀಲ್, ವೇಗಿ ತಿತಾಸ್ ಸಧು, ಅರುಂಧತಿ ರೆಡ್ಡಿ, ಆಲ್ರೌಂಡರ್ ಅಮನ್‌ಜೋತ್ ಕೌರ್ ಹಾಗೂ ವಿಕೆಟ್ ಕೀಪರ್ ಉಮಾ ಚೆಟ್ರಿ ಇದೇ ಮೊದಲ ಬಾರಿಗೆ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಲ್ಲಿ ಸ್ಥಾನ ಪಡೆದಿದ್ದಾರೆ.
ಯಾಶ್ತಿಕಾ ಭಾಟಿಯಾ, ರಾಧಾ ಯಾದವ್, ಸ್ನೆಹ್ ರಾಣಾ ಹಾಗೂ ಪೂಜಾ ವಸ್ತ್ರಾಕರ್ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಲ್ಲಿ ‘ಸಿ’ ಗ್ರೇಡ್ ಪಡೆದುಕೊಂಡಿದ್ದಾರೆ. ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ ಕಳೆದ ವರ್ಷ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಲ್ಲಿ ‘ಬಿ’ ಗ್ರೇಡ್ ಪಡೆದುಕೊಂಡಿದ್ದರು. ಆದರೆ ಈ ವರ್ಷ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದಿದ್ದಾರೆ.