5-10ಸಾವಿರ ರೂಪಾಯಿ ಕೊಟ್ರೆ ಎಕ್ಸಾಂ ಬರೀದೇನೇ ಮಾರ್ಕ್ಸ್‌ ಕಾರ್ಡ್‌ ಸಿಗತ್ತಂತೆ! ಮೂವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯದೇ ಇದ್ದರೂ ನಕಲಿ ಮಾರ್ಕ್ಸ್‌ ಕಾರ್ಡ್‌ ನೀಡುತ್ತಿದ್ದ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.

ಸ್ಟೆಡಿ ಸೆಂಟರ್​ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!