ಆರೋಗ್ಯಕರ ಆಹಾರ: ಉಪ್ಪು ಸೇವನೆಯನ್ನು ಕಡಿಮೆ ಮಾಡಿ. ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳನ್ನು ಹೆಚ್ಚಾಗಿ ಸೇವಿಸಿ. ಕೊಬ್ಬಿನಾಂಶವಿರುವ ಆಹಾರವನ್ನು ಕಡಿಮೆ ಮಾಡಿ.
ನಿಯಮಿತ ವ್ಯಾಯಾಮ: ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ. ನಡಿಗೆ, ಈಜು ಅಥವಾ ಸೈಕ್ಲಿಂಗ್ ನಂತಹ ಚಟುವಟಿಕೆಗಳನ್ನು ಮಾಡಿ.
ತೂಕ ನಿರ್ವಹಣೆ: ನಿಮ್ಮ ಎತ್ತರಕ್ಕೆ ಅನುಗುಣವಾಗಿ ತೂಕವನ್ನು ಕಾಪಾಡಿಕೊಳ್ಳಿ. ಯೋಗ, ಧ್ಯಾನ ಮಾಡಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಸಾಧ್ಯವಾದಷ್ಟು ಮಟ್ಟಿಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ.
ಮದ್ಯಪಾನ ಮತ್ತು ಧೂಮಪಾನವನ್ನು ತ್ಯಜಿಸಿ: ಮದ್ಯಪಾನ ಮತ್ತು ಧೂಮಪಾನ ರಕ್ತದೊತ್ತಡವನ್ನು ಹೆಚ್ಚಿಸಬಹುದು.
ನಿಯಮಿತ ತಪಾಸಣೆ: ನಿಮ್ಮ ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳಿ. ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಳ್ಳಿ. ದೇಹವನ್ನು ನಿರ್ಜಲೀಕರಣದಿಂದ ಕಾಪಾಡಿಕೊಳ್ಳಿ.