ಹೊಸದಿಗಂತ ವರದಿ ಸುಳ್ಯ:
ಕಾರು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.
ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದ ಬೋರ್‌ವೆಲ್ ಲಾರಿಗೆ ಜೀಪ್ ಡಿಕ್ಕಿ: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು
ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿ ಪರಾರಿಯಾಗಿದ್ದು, ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ.



